ಕರ್ನಾಟಕ

ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬೇರೆ ಪಕ್ಷದವರು ಹಿಂದೂಗಳಲ್ಲವೇ?: ಸಿ.ಟಿ. ರವಿಗೆ ಪ್ರಶ್ನಿಸಿದ ಸಿದ್ಧರಾಮಯ್ಯ

Pinterest LinkedIn Tumblr

ಬೆಂಗಳೂರು: ಆರ್.ಎಸ್.ಎಸ್ ಎಂದ ಕೂಡಲೇ ಉರಿದುಬೀಳುವ ಸಿ.ಟಿ ರವಿ ಅವರೇ, ಆರ್.ಎಸ್.ಎಸ್ ಎಂದರೆ ಏನು?
ಅದರ ಜೊತೆ ಬಿಜೆಪಿಯ ಸಂಬಂಧ ಏನು?
ಆರ್ ಎಸ್ ಎಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನು
ಉತ್ಪಾದಿಸಿ ಕೊಡುವ ಕಾರ್ಖಾನೆಯೇ?‌ ಎಂದು‌‌ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಷಭರಿತ ನುಡಿಗಳಲ್ಲಿ ಪ್ರಶ್ನಿಸಿದ್ದಾರೆ.

ಆರ್.ಎಸ್.ಎಸ್ ಎನ್ನುವುದು ಹಿಂದುಗಳ ಸಂಘಟನೆ ಎಂದು ನೀವು ಹೇಳುವುದಾದಾರೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬೇರೆ ಪಕ್ಷದವರು ಹಿಂದೂಗಳಲ್ಲವೇ? ದೆಹಲಿಯಲ್ಲಿ 10 ತಿಂಗಳಿಂದ ಬೀದಿಯಲ್ಲಿರುವವರು ಹಿಂದುಗಳಲ್ಲವೇ?
ವಾರದ ಹಿಂದೆ ಉತ್ತರಪ್ರದೇಶದಲ್ಲಿ ಅತ್ಯಾಚಾರಕ್ಕೀಡಾದ ದಲಿತ ಯುವತಿ ಹಿಂದು ಅಲ್ಲವೇ?. ಆರ್ ಎಸ್ ಎಸ್ ಸಾಂಸ್ಕೃತಿಕ ಸಂಘಟನೆ ಎಂದಾದರೆ ಅದರ ಸಂಸ್ಕೃತಿಯ ವ್ಯಾಖ್ಯಾನವೇನು?
ನಿನ್ನೆ ತಾನೆ ಮಂಗಳೂರಿನಲ್ಲಿ ಅಮಾಯಕ ವಿದ್ಯಾರ್ಥಿ – ವಿದ್ಯಾರ್ಥಿನಿಗಳ ಮೇಲೆ ನಿಮ್ಮ ಪರಿವಾರದ ಗೂಂಡಾಗಳು ನಡೆಸಿದ ದೌರ್ಜನ್ಯ ಕೂಡಾ ಈ ಸಂಸ್ಕೃತಿಯಲ್ಲಿ ಸೇರಿದೆಯೇ?‌ ಎಂದು ಕೇಳಿದ್ದಾರೆ.

ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು ಆರ್.ಎಸ್.ಎಸ್ ನಾಯಕರಿಗೆ ಗುತ್ತಿಗೆ ಕೊಟ್ಟವರಾರು? ಆರ್.ಎಸ್.ಎಸ್ ನಾಯಕರೇನು ಜನರಿಂದ ಚುನಾಯಿತರಾದ ನಾಯಕರೇ?
ಅವರು ಯಾಕೆ ಚುನಾವಣೆಯಲ್ಲಿ‌ ಸ್ಪರ್ಧಿಸಬಾರದು?
ನಿಮ್ಮ ಎರಡು ಸಂಘಟನೆಗಳ ನಡುವೆ ಮುಖ ಯಾವುದು? ಮುಖವಾಡ ಯಾವುದು?

ನಾನು ಮತ್ತು ನನ್ನಂತಹ ಕೋಟ್ಯಂತರ ಜನ
ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ.
ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ.

ಸಿ.ಟಿ ರವಿ ಅವರೇ, ನಿಮ್ಮನ್ನು ರೈತನ ಮಗ ಎನ್ನುತ್ತೀರಿ,
ನಾನು ಉಡುವ ರೈತ ಮಕ್ಕಳ ಪಂಚೆಯನ್ನು ಗೇಲಿ ಮಾಡುತ್ತೀರಿ. ನಿಮ್ಮ ತಂದೆ ಕೂಡಾ ಪಂಚೆ ಉಡುವವರು ಎಂದು ಅಂದುಕೊಳ್ತೀನಿ. ನಿಮ್ಮಂತಹ ಮಗನ ಬಗ್ಗೆ ಅವರೇನು ಅಂದುಕೊಳ್ಳಬಹುದು ಯೋಚಿಸಿದ್ದೀರಾ?
ಈ ರೀತಿ ನಾಲಿಗೆ ಸಡಿಲ ಬಿಟ್ಟು ಮನೆಗೆ ಹೋಗುವಾಗ ಹುಷಾರಾಗಿರಿ.

ಕೊನೆಯದಾಗಿ ಸಿ.ಟಿ ರವಿ ಅವರೇ?
ಕಣ್ಣಿಗೆ ಪೊರೆ ಬಂದವರು ಕತ್ತಲಲ್ಲಿ ಕಾರು ಚಲಾಯಿಸಬಾರದು, ಅಪಘಾತವಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಾರೆ.
ಪೊರೆ ಬಂದಿದ್ದರೆ ಕ್ಯಾಟಾರಕ್ಟ್ ಮಾಡಿಸಿಕೊಳ್ಳಿ. ಸಾರ್ವಜನಿಕರ ಜೀವ ಮುಖ್ಯ ಎಂದು ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್ ಹಾಗೂ ಟ್ವೀಟರ್ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

Comments are closed.