ಕರಾವಳಿ

ಮಂಗಳೂರಿಗೆ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ : ಜಿಲ್ಲಾಡಳಿತದ ವತಿಯಿಂದ ಪೂರ್ವ ಸಿದ್ದತಾ ಸಭೆ

Pinterest LinkedIn Tumblr

ಮಂಗಳೂರು : ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 7 ಹಾಗೂ 8 ರಂದು ಮಂಗಳೂರಿಗೆ ಆಗಮಿಸಿ, ವಾಸ್ತವ್ಯ ಮಾಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಬೇಕಾದ ಪೂರ್ವಸಿದ್ದತೆಗಳು ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಾಣೆ, ಡಿಸಿಪಿ ಹರಿರಾಮ್ ಶಂಕರ್, ಸಹಾಯಕ ಆಯುಕ್ತ ಮದನ್ ಮೋಹನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಯಶವಂತ್, ಅಪರ ಜಿಲ್ಲಾಧಿಕಾರಿ ಮಾಣಿಕ್ಯ(ಪ್ರಭಾರ) ಸಭೆಯಲ್ಲಿ ಉಪಸ್ಥಿತರಿದ್ದರು.

Comments are closed.