ಕರಾವಳಿ

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಮಂಗಳೂರು ವಿವಿ ಕುಲಪತಿ ತಂಡ ಚಾಂಪಿಯನ್

Pinterest LinkedIn Tumblr

ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್ ನಲ್ಲಿ ಮೀಡಿಯಾ ಗ್ರಾಮೀಣ ತಂಡವನ್ನು ಮಣಿಸಿ ಕುಲಪತಿ ತಂಡ ಟ್ರೋಫಿಯನ್ನು ಎತ್ತಿಕೊಂಡಿದೆ.

ಶನಿವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಬಹುಮಾನ ವಿತರಿಸಿದರು.

ಕುಲಪತಿ ಇಲೆವೆನ್ ನ ಸಂದೀಪ್ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ,ಅಶ್ವಥ್ ಬೆಸ್ಟ್ ಬ್ಯಾಟ್ಸ್‌ಮನ್, ಮತ್ತು ಮೀಡಿಯಾ ಗ್ರಾಮೀಣ ತಂಡದ ಪುನೀತ್ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಪಡೆದರು.

ಮುಖ್ಯ ಅತಿಥಿಗಳಾಗಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇದರ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ, ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

ಸೌಹಾರ್ದ ಕ್ರಿಕೆಟ್‌ ಟೂರ್ನಿಗೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ದ.ಕ.ಜಿಲ್ಲಾಡಳಿತ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಟೂರ್ನಮೆಂಟ್ ಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು.

ಸದಾ ಕೆಲಸದ ಒತ್ತಡದಲ್ಲಿರುವ ಅಧಿಕಾರಿಗಳು ಮತ್ತು ಪತ್ರಕರ್ತರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಲು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಭಿಪ್ರಾಯಪಟ್ಟರು. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರಾಯ್, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋಣಾವನೆ ಋಷಿಕೇಶ್ ಭಗವಾನ್, ಮಂಗಳೂರು ಉಪವಿಭಾಗ ಅಧಿಕಾರಿ ಮದನ್ ಮೋಹನ್, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇದರ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು.

ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ ಸೋಜ, ಖ್ಯಾತ ವೈದ್ಯರಾದ ಡಾ.ಅವಿನಾಶ್, ದ.ಕ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು ಟೂರ್ನಮೆಂಟ್ ನಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಇಲೆವೆನ್, ಕುಲಪತಿ ತಂಡ,ಸಹ್ಯಾದ್ರಿ, ಪತ್ರಕರ್ತರ ನಗರ ಮತ್ತು ಗ್ರಾಮೀಣ ತಂಡಗಳು ಭಾಗವಹಿಸಿದ್ದವು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು, ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ವಿಜಯ್ ಕೋಟ್ಯಾನ್ ಕಾರ್ಯ ಕ್ರಮ ನಿರೂಪಿಸಿದರು.

Comments are closed.