ಕರಾವಳಿ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಚಂಡಿಕಾಹೋಮ ನೆರವೇರಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

Pinterest LinkedIn Tumblr

ಕುಂದಾಪುರ: ನವರಾತ್ರಿ ಶುಭ ಸಂದರ್ಭದಲ್ಲಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಪತ್ನಿ ಪ್ರಫುಲ್ಲಾ ಹಾಗೂ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಗೆ ಚಂಡಿಕಾ ಹೋಮ ಸಹಿತ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ಅರಗ ಜ್ಞಾನೇಂದ್ರ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ,ಕಾರ್ಯನಿರ್ವಹಣಾಧಿಕಾರಿ ಪಿ. ಬಿ. ಮಹೇಶ್ ಇದ್ದರು.

Comments are closed.