ಕರಾವಳಿ

ನಾಳೆ ಮಂಗಳೂರು ಹಾಗೂ ಉಡುಪಿಗೆ ಮುಖ್ಯಮಂತ್ರಿ ಆಗಮನ: ಶ್ರೀ ಕ್ಷೇತ್ರ ಕುದ್ರೋಳಿಗೆ ಸಂಜೆ 3ರಿಂದ 7 ಪ್ರವೇಶ ನಿರ್ಬಂಧ

Pinterest LinkedIn Tumblr

ಮಂಗಳೂರು, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಆ.13ರಂದು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೈಗೊಂಡ ಪ್ರವಾಸ ಕಾರ್ಯಕ್ರಮ ಪರಿಷ್ಕೃತವಾಗಿದೆ.

ಪರಿಷ್ಕೃತ ಪ್ರವಾಸದ ವಿವರ ಇಂತಿದೆ:

ಅ.13ರ ಬುಧವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ತೆರಳುವರು.

ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ 4ಗಂಟೆಗೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಮಂಗಳೂರಿಗೆ ಆಗಮಿಸಿ ಅವರು ಸಂಜೆ 5 ಗಂಟೆಗೆ ಕೋಡಿಯಾಲ್‍ಬೈಲ್‍ನ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡುವರು.

ಸಂಜೆ 5.20ಕ್ಕೆ ಕುದ್ರೋಳಿಯಿಂದ ಹೊರಟು ಸಂಜೆ 5.45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಕುದ್ರೋಳಿ: ಸಂಜೆ 3ರಿಂದ 7 ಪ್ರವೇಶ ನಿರ್ಬಂಧ

ಕುದ್ರೋಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನಲೆಯಲ್ಲಿ ಬುಧವಾರ (ಅ.13) ಸಂಜೆ 3.00ರಿಂದ 7.00ಗಂಟೆಯವರೆಗೆ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ದರುಶನಕ್ಕೆ ಅವಕಾಶ ನೀಡಲಾಗುವುದು.

ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.