ಕರಾವಳಿ

ನೈತಿಕ ಪೊಲೀಸ್’ಗಿರಿ ವಿಚಾರ; ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಆಂಡ್ ರಿಯಾಕ್ಷನ್ ಸಹಜ’ ಎಂದ ಸಿಎಂ

Pinterest LinkedIn Tumblr

ಮಂಗಳೂರು: ಕರಾವಳಿ ಭಾಗದಲ್ಲಿ ನಡೆಯುವ ಅನೈತಿಕ ಪೊಲೀಸ್ ಗಿರಿ ಅತ್ಯಂತ ಸೂಕ್ಷ್ಮ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಂಗಳೂರಿಗೆ ಆಗಮಿಸಿದ ವೇಳೆ ಅವರು ಮಾಧ್ಯಮದ ಜೊತೆ ಮಾತನಾಡಿದರು.

ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಈ ಸಮಾಜದಲ್ಲಿ ಭಾವನೆಗಳ ಮೇಲೆ ನಿಂತಿದೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ‌. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದ ಅವರು,ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ. ಮೊರಾಲಿಟಿ ಅನ್ನೋದು ಸಮಾಜದಲ್ಲಿ ಬೇಕಲ್ವಾ..? ನೈತಿಕತೆ ಇಲ್ಲದೆ ಬದುಕೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ಇರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಅಗುತ್ತೆ ಎಂದರು.‌

 

Comments are closed.