ಕರಾವಳಿ

ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಗೋ ಸಾಗಾಟ: ಓರ್ವನ ಬಂಧನ, 5 ಜಾನುವಾರುಗಳ ರಕ್ಷಣೆ

Pinterest LinkedIn Tumblr

ಉಡುಪಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಐದು ಗಂಡು ಕರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ ಎಂಬಾತನನ್ನು ಬಂಧಿಸಲಾಗಿದೆ. ಇನ್ನೋರ್ವ ಪರಾರಿಯಾಗಿದ್ದಾ‌ನೆ. ಶಂಕರನಾರಾಯಣ ಗ್ರಾಮದ ಯಡಮಕ್ಕಿ ಕ್ರಾಸ್ ಬಳಿ ಘಟನೆ ನಡೆದಿದೆ.

ಘಟನೆ ವಿವರ:
ಆರೋಪಿಗಳು ಕೆ.ಎ.14 ಸಿ. 6789 ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಹೊಂದದೇ 5 ಗಂಡು ದನದ ಕರುಗಳನ್ನು ಕಳವು ಮಾಡಿಕೊಂಡು ಅವುಗಳಿಗೆ ಮೇವು, ಬಾಯಾರಿಕೆ ನೀಡದೆ ಹಿಂಸಾತ್ಮಕವಾಗಿ ಪಿಕಪ್ ವಾಹನದಲ್ಲಿ ತುಂಬಿಸಿ ವಧೆ ಮಾಡಲು ಕುಂದಾಪುರ ತಾಲೂಕಿನ ಶಂಕರನಾರಾಯಣ ಯಡಮಕ್ಕಿ ಕ್ರಾಸ್ ಬಳಿ ಸಾಗಾಟ ಮಾಡುತ್ತಿದ್ದಾಗ ಶಂಕರನಾರಾಯಣ ಪಿಎಸ್ಐ ಶ್ರೀಧರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕಲಂ: 379 ಐ.ಪಿ.ಸಿ. ಮತ್ತು ಕಲಂ 4,5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ 2020 ರ ಕಲಂ 11 (1) (ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Comments are closed.