ಕರಾವಳಿ

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ: ಕರಾವಳಿಯಲ್ಲಿ ಮುಂಜಾನೆಯಿಂದ ಸಿಡಿಲು ಸಹಿತ ವರ್ಷಧಾರೆ..!

Pinterest LinkedIn Tumblr

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬಹಳಷ್ಟು ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಶನಿವಾರ ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾರೀ ಸಿಡಿಲು ಗುಡುಗು ಸಹಿತ ಮಳೆಯಾಗುತ್ತಿದೆ.

ರಾಜ್ಯದಲ್ಲಿ ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ರಾಜ್ಯದ ಉಳಿದ ಜಿಲ್ಲೆಗಳಲ್ಲಿ 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎನ್ನಲಾಗಿದೆ. ಕರಾವಳಿಯಲ್ಲಿ ಭತ್ತದ ಬೆಳೆ ಕಟಾವು ಹಂತಕ್ಕೆ ಬಂದಿದ್ದು ವ್ಯಾಪಕ ಮಳೆಯಿಂದಾಗಿ ಬೆಳೆ ಹಾನಿಯಾಗುವ ಭೀತಿಯಿದೆ.

 

Comments are closed.