ಕರಾವಳಿ

ಮಾಲೀಕರಿಲ್ಲದ ವೇಳೆ ಮನೆಗೆ ನುಗ್ಗಿ ನಗದು, 7.21 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು

Pinterest LinkedIn Tumblr

ಉಡುಪಿ: ಯಾರೂ ಇಲ್ಲದ ವೇಳೆ ಮಲ್ಪೆಯ ವಡಭಾಂಡೇಶ್ವರ ದೇವಸ್ಥಾನದ ಬಳಿಯ ಮನೆಗೆ ನುಗ್ಗಿದ ಕಳ್ಳರು ನಗದು, ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಿದ್ದಾರೆ.

ಜಯಲಕ್ಷ್ಮಿ ಎಂಬುವವರು ಅಕ್ಟೋಬರ್ 16 ರಂದು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿನಲ್ಲಿರುವ ಮಗನ ಮನೆಗೆ ಹೋಗಿದ್ದು ಈ ಸಮಯದಲ್ಲಿ ನಗದು, ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಲಾಗಿದೆ. ಮನೆಗೆ ವಾಪಾಸ್ಸಾದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಮನೆಯ ಮುಖ್ಯ ಬಾಗಿಲಿನ ಚಿಲಕವನ್ನು ಒಡೆದು ಒಳ ಪ್ರವೇಶಿಸಿ ಬಳಿಕ ಕೋಣೆಯಲ್ಲಿದ್ದ ಅಲ್ಮೆರಾವನ್ನು ಒಡೆದು 7.21 ಲಕ್ಷ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣಗಳು ಹಾಗೂ 70,000 ನಗದು ಕದ್ದು ಹೋಗಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

 

Comments are closed.