ಉಡುಪಿ: ಜಿಲ್ಲೆಯ ಖಾಸಗಿ ಕಾಲೇಜೊಂದರ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಕ್ಟೋಬರ್ 16 ರಂದು ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿನ್ನಲೆಯಲ್ಲಿ ಪೊಲೀಸರು ಆಕೆಯ ಸ್ನೇಹಿತ ದೆಹಲಿ ಮೂಲದ ಆರ್ಯನ್ ಚಂದಾವನಿ ಎನ್ನುವಾತನನ್ನು ಬಂಧಿಸಲಾಗಿದೆ.
ಅ.16ರಂದು ಇಂದ್ರಾಳಿಯ ಫ್ಲ್ಯಾಟ್ ನಲ್ಲಿ ಕುಡಿದ ನಶೆಯಲ್ಲಿ ತನ್ನ ಮೇಲೆ ಆರೋಪಿ ಆರ್ಯನ್ ಚಂದಾವನಿ ಅತ್ಯಾಚಾರ ನಡೆಸಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Comments are closed.