ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಫವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ ಎಂದು ಬೆಳಿಗ್ಗೆ ಹೇಳಲಾಗಿತ್ತು. ಆದರೆ ಅಂತಿಮ ನಮನಕ್ಕಾಗಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸುತ್ತಿರುವುದರಿಂದ ಇಂದಿನ ಬದಲಾಗಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್ ರಾಜಕುಮಾರ್ ಅವರ ಮೊದಲ ಪುತ್ರಿ ದೃತಿ ಇಂದು ಸಂಜೆ ರಾಜ್ಯಕ್ಕೆ ಆಗಮಿಸುವುದರಿಂದ ರಾತ್ರಿಯಲ್ಲಿ ಅಂತ್ಯಕ್ರಿಯೆ ನಡೆಸುವುದು ಕಷ್ಟಸಾಧ್ಯ. ಅಲ್ಲದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಪ್ಪುವಿನ ದರ್ಶನ ಪಡೆಯಲು ಕ್ರೀಡಾಂಗಣಕ್ಕೆ ಬರುತ್ತಿರುವುದರಿಂದ ನಾಳೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯುವುದರಿಂದ ಅಭಿಮಾನಿಗಳು ಶಾಂತಿಯುತವಾಗಿ ದರ್ಶನ ಪಡೆಯಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಹೃದಯಾಘಾತದಿಂದಾಗಿ ಪುನೀತ್ ರಾಜಕುಮಾರ್ ಶುಕ್ರವಾರ ನಿಧನರಾಗಿದ್ದರು. ಸದಾಶಿವನಗರದ ನಿವಾಸಕ್ಕೆ ಮೃತದೇಹ ಕೊಂಡೊಯ್ದ ಬಳಿಕ ನಿನ್ನೆ ಸಂಜೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಪುನೀತ್ ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
Comments are closed.