ಬೆಂಗಳೂರು: ಹೃದಯಾಘಾತದಿಂದಾಗಿ ಶುಕ್ರವಾರ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 10.30ರೊಳಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಲಿದೆ ಎನ್ನಲಾಗಿದೆ.

ಇಂದು ಇಡೀ ದಿನ ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ನಡೆಯುತ್ತಿದೆ. ನಾಳೆ ಬೆಳಗ್ಗೆ 10.30 ರ ಒಳಗೆ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿರುವುದರಿಂದ ಬೆಳಗ್ಗೆ 6 ರಿಂದ ಕಂಠೀರವ ಸ್ಟೇಡಿಯಂನಿಂದ ಅಂತಿಮಯಾತ್ರೆ ಸಾಗಲಿದೆ.
ಪುನೀತ್ ರಾಜಕುಮಾರ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಡಾ.ರಾಜ್ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ವಿವಿದೆಡೆಯಿಂದ ಅಭಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
Comments are closed.