ಕರಾವಳಿ

ನಾಳೆ ಕರ್ನಾಟಕ ರಾಜ್ಯೋತ್ಸವ : ದ.ಕ.ಜಿಲ್ಲೆಯಲ್ಲಿ ಸಚಿವ ಅಂಗಾರರಿಂದ ಧ್ವಜಾರೋಹಣ -ರಾಜ್ಯೋತ್ಸವ ಸಂದೇಶ

Pinterest LinkedIn Tumblr

ಮಂಗಳೂರು ಅ.31 ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವವನ್ನು ನ.01ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡುವರು.

ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ.ಭರತ್ ಶೆಟ್ಟಿ. ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ.ಯು., ಸಂಜೀವ ಮಠಂದೂರು, ಉಮಾನಾಥ್.ಎ. ಕೋಟ್ಯಾನ್, ಡಿ. ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್. ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್ ಕೆ., ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಉಪಸ್ಥಿತರಿರುವರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಜಗದೀಶ್.ಪೈ, ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕರ್ನಾಟಕ ಬ್ಯಾರಿ ಸಾಹಿತ್ಯ ರಹೀಂ ಉಚ್ಚಿಲ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು.

Comments are closed.