ಕರ್ನಾಟಕ

‘ಯುವರತ್ನ’ ಅಪ್ಪುಗೆ ಮರಣೋತ್ತರವಾಗಿ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಘೋಷಣೆ

Pinterest LinkedIn Tumblr

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಚಿತ್ರದುರ್ಗದ ಮುರುಘಾಮಠ ಕೊಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಮರಣೋತ್ತರವಾಗಿ ಸಿಗುತ್ತಿದೆ. ಮುರುಘಾಶ್ರೀಗಳು ಇಂದು (ನ. 4) ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಈ ಬಗ್ಗೆ ಘೋಷಣೆ ಮಾಡಿದ್ದು ಬಸವಶ್ರೀ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ. ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ಈ ಸಮಾರಂಭ ನಡೆಯಲಿದ್ದು, ಪುನೀತ್ ಪರವಾಗಿ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ನಟ ಶಿವರಾಜಕುಮಾರ್ ಅವರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ನವೆಂಬರ್ 10ರಂದು ಪುನೀತ್ ಮನೆಗೆ ಮುರುಘಾಶ್ರೀ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

 

Comments are closed.