ಕುಂದಾಪುರ: ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ ಶುಕ್ರವಾರ ಗೋದೂಳಿ ಮುಹೂರ್ತದಲ್ಲಿ ನಡೆಯಿತು.

ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಗೋಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಗ್ರಾಸ ನೀಡಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಮುಜರಾಯಿ ಇಲಾಖೆಯ ಅದೀನದ ದೇವಸ್ಥಾನಗಳಲ್ಲಿ ಗೋಪೂಜೆ ನೆರವೇರಿಸಲಾಗುತ್ತದೆ. ಗೋ ಸಾಕ್ಷಾತ್ ದೇವರು. ಗೋಪೂಜೆ ಮಾಡುವ ಸತ್ಕ್ರರ್ಮ ಎಲ್ಲರಲ್ಲಿಯೂ ಬೆಳೆಯಬೇಕು. ಗೋಹತ್ಯೆಯನ್ನು ನಿಯಂತ್ರಿಸಬೇಕು, ಗೋಗಳ ರಕ್ಷಣೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಸೌಕೂರಿನಲ್ಲಿ ಗೋಶಾಲೆ ಮಾಡುವ ಯೋಜನೆ ರೂಪಿಸಿ, ಸ್ಥಳದ ಕೊರತೆಯಿದ್ದರೆ ಸರ್ಕಾರಿ ಸ್ಥಳವನ್ನು ನೀಡಲು ಚಿಂತನೆ ನಡೆಸಲಾಗುವುದು ಎಂದರು.
ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಮಂಜಯ್ಯ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅನಂತ ಅಡಿಗ ಸೌಕೂರು, ಕುಪ್ಪ ಗುಲ್ವಾಡಿ, ರೀತಾ ದೇವಾಡಿಗ ಸೌಕೂರು, ಆಶಾ ಸಂತೋಷ್ ಪೂಜಾರಿ ಮುಕ್ಕೋಡು ನೇರಳಕಟ್ಟೆ, ಜಯರಾಮ ಶೆಟ್ಟಿ ಹಡಾಳಿ, ಅಂಪಾರು, ಕೆ.ಸುಬ್ಬಣ್ಣ ಶೆಟ್ಟಿ ಕೆಂಚನೂರು, ಉಮೇಶ ಮೊಗವೀರ ಕಂಡ್ಲೂರು, ಜಿ.ಶೇಖರ ಪೂಜಾರಿ ಗುಲ್ವಾಡಿ ಹಾಗೂ ರಘುರಾಮ ಶೆಟ್ಟಿ, ದೇವಳದ ಅರ್ಚಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
Comments are closed.