ಕರ್ನಾಟಕ

ಅಗಲಿದ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ: ಸಮಾಧಿ ಬಳಿ ಕುಟುಂಬದವರಿಂದ 11ನೇ ದಿನದ ಪೂಜೆ

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.

11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದಾರೆ. ಭಾನುವಾರ (ನ.7) ರಾತ್ರಿಯಿಂದಲೇ ಈ ಕಾರ್ಯಕ್ಕೆ ಸಕಲ ಸಿದ್ಧತೆ ಶುರುವಾಗಿತ್ತು. ಇಂದು ಬೆಳಗ್ಗೆಯೇ ಸದಾಶಿವನಗರದಲ್ಲಿರುವ ಪುನೀತ್​ ರಾಜ್​ಕುಮಾರ್​ ಅವರ ನಿವಾಸದಲ್ಲಿ ಪೂಜಾ ಕಾರ್ಯಗಳು ಆರಂಭ ಆಗಿವೆ. ಪುನೀತ್ ಅವರ ಸಮಾಧಿಯನ್ನು ಪುಷ್ಪಗಳಿಂದ ಅಲಂಕರಿಸಲಾಗಿದೆ.

ಬೆಳಗ್ಗೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳಾದ ಧ್ರುತಿ, ವಂದಿತಾ, ಸಹೋದರರಾದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಇಡೀ ಕುಟುಂಬದ ಸದಸ್ಯರು ಪುನೀತ್​ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಲಿದ್ದಾರೆ.

ಚಿಕ್ಕಪ್ಪನ ಪುಣ್ಯ ತಿಥಿ ಕಾರ್ಯ ನೆರವೇರಿಸುವ ಮೂಲಕ ವಿನಯ್ ರಾಜ್ ಕುಮಾರ್ ಕೇಶಮುಂಡನ ಮಾಡಿಸಿಕೊಂಡು ಅಗಲಿದ ಅಪ್ಪುಗೆ ಪಿಂಡ ಪ್ರದಾನ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆ ನಂತರ ಪುಣ್ಯತಿಥಿ ಕಾರ್ಯ ಜರುಗಲಿದ್ದು. ಕುಟುಂಬಸ್ಥರು, ಸಂಬಂಧಿಗಳು, ಚಿತ್ರರಂಗದ ಪ್ರಮುಖರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

 

Comments are closed.