ಕರಾವಳಿ

ಶಂಕರನಾರಾಯಣದಲ್ಲಿ ಕಾಡುಕೋಣ ಹತ್ಯೆಗೈದಿದ್ದ ಮೂವರು ಆರೋಪಿಗಳ ಬಂಧನ

Pinterest LinkedIn Tumblr

ಉಡುಪಿ: ಮೇ.31 ರಂದು ಶಂಕರನಾರಾಯಣ ವಲಯದ ಹೆಂಗವಳ್ಳಿ ಗ್ರಾಮ ದೊಡ್ಡಬೆಳಾರು ಪ್ರದೇಶದಲ್ಲಿ ಹೆಣ್ಣು ಕಾಡುಕೋಣ ಹತ್ಯೆ ಬಗ್ಗೆ ದಾಖಲಾಗಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ.

ಕಂಡ್ಲೂರು ಕಾವ್ರಾಡಿ ನಿವಾಸಿಗಳಾದ ಸಫಾನ್ ಕರಾನಿ (30), ಕೆ. ನಾಹಿಫ್ (23), ಬ್ರಹ್ಮಾವರ ಹಿಲಿಯಾಣ ಮೂಲದ ಮಹಮ್ಮದ್ ಆಜೀಮ್ (26) ಬಂಧಿತ ಆರೋಪಿಗಳು. ಬಂಧಿತರಿಂದ ದ್ವಿಚಕ್ರ ವಾಹನ, ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಎಂ. ವಿ. ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್ ಇವರ ಮಾರ್ಗದರ್ಶನದಲ್ಲಿ ಶಂಕರನಾರಾಯಣ ವಲಯದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಜಿ., ಉಪ ವಲಯ ಅರಣ್ಯಾಧಿಕಾರಿಗಳಾದ ಕೀರ್ತನ್ ಶೆಟ್ಟಿ, ವೀರಣ್ಣ, ಅರಣ್ಯ ರಕ್ಷಕರಾದ ರವಿ, ರವೀಂದ್ರ ಅರಣ್ಯ ವೀಕ್ಷಕರಾದ ಶಿವಣ್ಣ ಆರ್. ವೇಷಗಾರ್, ಮತ್ತು ವಾಹನ ಚಾಲಕ ವಿಜಯ ಭಾಗವಹಿಸಿದ್ದರು.

Comments are closed.