
ಮಂಗಳೂರು : ಮಂಗಳೂರಿನ ಪ್ರಮುಖ ಸ್ಥಳದಲ್ಲಿರುವ ಬಲ್ಲಾಳ್ ಭಾಗ್ ಫ್ರೆಂಡ್ಸ್ (ರಿ) ಸದಸ್ಯರ ಮೇಲೆ 30 ಅಕ್ಟೋಬರ್ 2021 ರ ತಡರಾತ್ರಿ 15 ಜನ ಮತಾಂಧ ಮುಸಲ್ಮಾನರು ಅವರ ಕಚೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಕೃತ್ಯವನ್ನು ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದು ಬಜರಂಗದಳದ ಪ್ರಮುಖರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೈಯಲ್ಲಿ ಮಾರಕಾಸ್ತ್ರ ಹಿಡಿದು ಹಲ್ಲೆ ನಡೆಸಿರುವುದು ಬಹಳ ಆತಂಕಕಾರಿಯಾಗಿದೆ. ಅಲ್ಲದೆ ಈ ತಂಡದ ನೇತೃತ್ವವನ್ನು ಈ ಹಿಂದೆ ಮಂಗಳೂರಿನಲ್ಲಿ ನಡೆದ CAA – NRC ಗಲಭೆಯಲ್ಲಿ ಭಾಗಿಯಾದ ಕುದ್ರೋಳಿ ನಿವಾಸಿ ಮೊಹಮ್ಮದ್ ಇರ್ಫಾನ್ ವಹಿಸಿದ್ದು ಮತ್ತು ಕೃತ್ಯದಲ್ಲಿ ಕೆಲವು ಜಿಹಾದಿಗಳ ಕೈವಾಡವಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಲ್ಲ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಬಜರಂಗದಳ ಆಗ್ರಹಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Comments are closed.