ಕರ್ನಾಟಕ

ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಕಾಮುಕನನ್ನು ಬಂಧಿಸಿದ ಪೊಲೀಸರು

Pinterest LinkedIn Tumblr

ಚಿಕ್ಕಬಳ್ಳಾಪುರ: ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ನಗರಸಭೆಯ ಮೀನು-ಮಾಂಸ ಮಾರಾಟ ಮಳಿಗೆಗೆಳ ಸಂಕೀರ್ಣದ ಬಳಿ 40 ವರ್ಷದ ಭಿಕ್ಷುಕಿ ಮಲಗಿದ್ದ ವೇಳೆ ಮಾರುಕಟ್ಟೆ ಸಂಕೀರ್ಣದಲ್ಲಿ ತಳ್ಳು ಗಾಡಿಯನ್ನು ಇಟ್ಟುಕೊಂಡು ಚಕ್ಕೆ, ಲವಂಗ ಮಾರಾಟ ಮಾಡುತ್ತಿದ್ದ ಅಬ್ದುಲ್ಲಾ ಎಂಬಾತ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಸದ್ಯ ಆರೋಪಿಯ ಕೃತ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ನಿದ್ರೆಯಲ್ಲಿದ್ದ ವೇಳೆ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಎಚ್ಚರಗೊಂಡ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಕ್ಕೆ, ಗಂಭೀರವಾಗಿ ಗಾಯಗೊಳಿಸಿ ಅತ್ಯಾಚಾರವೆಸಗಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಭಿಕ್ಷುಕಿ ಸಾವಿಗೀಡಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್​ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Comments are closed.