ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಗಳೂರು ಬಿ.ಸಿ.ರೋಡ್ ಮಧ್ಯೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ಕ್ಯಾಟರಿಂಗ್ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಮೃತಪಟ್ಟಿದ್ದು ಸಿಂಚನ್ ಮತ್ತು ಸುದೀಪ್ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ವಾಹನ ಮರಕ್ಕೆ ಢಿಕ್ಕಿ ಹೊಡೆದಿದೆ. ಕ್ಯಾಟರಿಂಗ್ ಕೆಲಸವನ್ನು ಮುಗಿಸಿ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಇನ್ನು ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಉಳಿದಿಬ್ಬರು ಗಾಯಾಳುಗಳನ್ನು ಸಮೀಪದ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Comments are closed.