ಕರ್ನಾಟಕ

ಬಿಟ್ ಕಾಯಿನ್ ಹಗರಣದ ಬಗ್ಗೆ ಮಾಹಿತಿ ಕೊಡಲಾಗದಿದ್ದರೆ ಸಿಎಂ ಅಧಿಕಾರ ಬಿಟ್ಟು ಹೋಗಲಿ: ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ಮೊದಲ ಬಾರಿ ಬಿಟ್ ಕಾಯಿನ್ ಸೂತ್ರಧಾರ ಶ್ರೀಕಿ ಬಂಧನ ಮತ್ತು ಜಾಮೀನಿನ ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಆರ್.‌ಅಶೋಕ್ ಅವರಿಗ್ಯಾಕೆ ಇಷ್ಟೊಂದು ಆಸಕ್ತಿ? ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ? ಯಾರಾದರೂ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೆ? ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ? ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ?

ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ದ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಕಾಲದಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಕೇಳುತ್ತಿದ್ದೇವೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ.

ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರ್ಕಾರ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ಕೊಡಬೇಕು. ಈ ಕೆಲಸ ಅವರಿಂದ ಆಗಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಲಿ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

Comments are closed.