ತಿರುಮಲ: ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ ವಿಮಾನ ಸಂಚಾರಕ್ಕೂ ತೊಂದರೆಯಾಗಿದೆ.
ಹೈದರಾಬಾದ್ ಮತ್ತು ಬೆಂಗಳೂರಿನಿಂದ ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಎರಡು ಪ್ರಯಾಣಿಕರ ವಿಮಾನಗಳು ಇಂದು ಪ್ರತಿಕೂಲ ಹವಾಮಾನದಿಂದಾಗಿ ಹಿಂತಿರುಗಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ನವದೆಹಲಿಯಿಂದ ತಿರುಪತಿಗೆ ವಿಮಾನವನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ.
Comments are closed.