ಮಂಗಳೂರು: ವಿಧಾನ ಪರಿಷತ್ ಚುನಾವಣೆ ಸ್ಪರ್ಧೆಯಿಂದ ಹಿರಿಯ ಸಹಕಾರಿ ಧುರೀಣ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದು ಈ ಬಗ್ಗೆ ಅಧೀಕೃತ ಮಾಹಿತಿ ನೀಡಿದ ಬಗ್ಗೆ ವರದಿಯಾಗಿದೆ.

ಶನಿವಾರ ಈ ಬಗ್ಗೆ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆಯಿದ್ದು ರಾಜಕೀಯ ವ್ಯವಸ್ಥೆಯಿಂದ ದೂರವಿದ್ದು ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು.
ಪಕ್ಷಾತೀತವಾಗಿ ಚುನಾವಣೆಗೆ ನಿಲ್ಲಿ ಎಂದು ಹಿತೈಷಿಗಳು, ಅಭಿಮಾನಿಗಳು ಅಭಿಪ್ರಾಯ ನೀಡಿದ್ದಾರೆ. ಆದರೆ ಚುನಾವಣೆಗೆ ನಿಂತರೆ ಸಹಜವಾಗಿ ಒಂದು ಪಕ್ಷದ ಪರವಾಗಿ ಹೋಗಬೇಕಾಗುತ್ತದೆ. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ನಿಲ್ಲುವುದಿಲ್ಲ ಎಂದರು.
ವಿಧಾನ ಪರಿಷತ್ನಲ್ಲಿ ಸಹಕಾರಿ ಕ್ಷೇತ್ರಕ್ಕೆ ಒಂದು ಅವಕಾಶವನ್ನು ನೀಡುವ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸಿ ಎಂದು ಮತದಾರರಲ್ಲಿ, ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದರು.
Comments are closed.