ಮಡಿಕೇರಿ: ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ವೇಳೆ ಘೋಷಣೆ ಕೂಗಿದ್ದ ವಿಡಿಯೋವನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಮೂವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಶನಿವಾರ ಸಂತೆ ಗ್ರಾಮ ಪಂಚಾಯತ್ ಸದಸ್ಯ ರಘು, ಮಾಜಿ ಸದಸ್ಯ ಹಾಗು ಪತ್ರಕರ್ತ ಹರೀಶ್ ಹಾಗು ಕುಶಾಲ್ ನಗರದ ಗಿರೀಶ್ ಕೋಮು ಸೌಹಾರ್ದ ಕದಡುವ ದುರುದ್ದೇಶದಿಂದ ತಿರುಚಿ ಪಾಕಿಸ್ತಾನ ಜಿಂದಾಬಾದ್ ಹೇಳಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಎಫ್‌ಐಆರ್ ನಲ್ಲಿ ಹೇಳಲಾಗಿದೆ.
ಇನ್ನು ಪ್ರತಿಭಟನೆಯ ವೇಳೆ ಮುಸ್ಲಿಂ ಮಹಿಳೆಯರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ವಿರುದ್ಧ ಐಪಿಸಿ 34, 153 ಅಡಿಯಲ್ಲಿ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.