ಉಡುಪಿ: ಬೈಕ್‌ಗೆ ಅಡ್ಡ ಬಂದ ಜಿಂಕೆಯೊಂದು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪುವಿನ ಶಂಕರಪುರ ಎಂಬಲ್ಲಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್ (20) ಎಂದು ಗುರುತಿಸಲಾಗಿದೆ.
ತಾಲೂಕಿನ ಶಂಕರಪುರದ ಸುಭಾಸ್‌ನಗರ ಎಂಬಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ಗೆ ಜಿಂಕೆಯೊಂದು ಅಡ್ಡ ಬಂದ ಪರಿಣಾಮ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಹರ್ಷಿತ್ ಗಂಭೀರ ಗಾಯಗೊಂಡಿದ್ದು ಅವರನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments are closed.