ಕರಾವಳಿ

ಖಾಸಗಿ ಟಿವಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ; ಮಂಗಳೂರು ಮೂಲದ ವಕೀಲ ಬಂಧನ

Pinterest LinkedIn Tumblr

ಮಂಗಳೂರು: ಖಾಸಗಿ ಟಿವಿ ವಾಹಿನಿಯೊಂದರ ವರದಿಗಾರನ ಮೇಲೆ ಸೋಮವಾರ ಸಂಜೆಯ ವೇಳೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಮೂಲದ ವಕೀಲ ಯದುನಂದನ್ ಬಂಧಿತ ಆರೋಪಿ.

ತಲೆಗೆ ತೀವ್ರವಾಗಿ ಹಲ್ಲೆಗೊಳಗಾದ ಪತ್ರಕರ್ತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದ್ದು, ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಠಾಣೆಯಲ್ಲಿ ಪ್ರತಿದೂರು ಕೂಡ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Comments are closed.