ಕಲಬುರಗಿ: ರಾಜ್ಯದಲ್ಲಿ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ದಾಳಿಯಲ್ಲಿ ತಗಲಾಕಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗ-ನಾಣ್ಯ, ಸಂಪತ್ತು ಪತ್ತೆಯಾಗಿದ್ದು ಎಸಿಬಿ ಅಧಿಕಾರಿಗಳನ್ನೇ ದಂಗುಬಡಿಸಿದೆ. ದಾಳಿ ವೇಳೆ ಸರ್ಕಾರದ ಸಿ ಮತ್ತು ಡಿ ಗ್ರೂಪ್ ನೌಕರರಿಗೆ ಸಂಬಂಧಪಟ್ಟ ಅಪಾರ ಪ್ರಮಾಣದ ಅಕ್ರಮ ಆಸ್ತಿಪಾಸ್ತಿಗಳನ್ನು ಶೋಧ ಮಾಡಲಾಗಿದೆ ಎನ್ನಲಾಗಿದೆ.
ಮನೆಯ ಪೈಪ್ ನಲ್ಲಿ ಸಿಕ್ತು ಲಕ್ಷಗಟ್ಟಲೆ ಹಣ..!
ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಯ ಮನೆಯ ಪೈಪ್ ನಲ್ಲಿಯೂ ಕಂತೆ ಕಂತೆ ಹಣ ಪತ್ತೆಯಾಗಿದ್ದು ಅಧಿಕಾರಿಳನ್ನು ಚಕಿತರನ್ನಾಗಿದೆ. ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದಾರ್ ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಮನೆಯ ನೀರಿನ ಪೈಪ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳು ಬರುತ್ತಿದ್ದಂತೆಯೇ ಭ್ರಷ್ಟ ಅಧಿಕಾರಿ ಶಾಂತಗೌಡ ಮತ್ತು ಕುಟುಂಬ ನೀರಿನ ಪೈಪ್ ನಲ್ಲಿ ಹಣ ಹಾಕಿದ್ದರು.
ಪ್ಲಂಬರ್ನನ್ನು ಕರೆಸಿ, ಪೈಪ್ ಕಟ್ ಮಾಡಿಸಿ, ಕಂತೆ ಕಂತೆ ಹಣ ಹೊರಕ್ಕೆ ತೆಗೆದಿದ್ದಾರೆ. ಮನೆಯ ಬಾತ್ ರೂಂ ಮತ್ತು ವಾಶ್ ಬೇಶನ್ ಪೈಪ್ ನಲ್ಲಿ ದುಡ್ಡಿನ ಕಂತೆ ಹಾಕಿದ್ದ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಶಾಂತಗೌಡ ಮತ್ತು ಆತನ ಪುತ್ರ ವಾಸವಿರುವ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿ ಮನೆಯ ಪೈಪ್ ನಲ್ಲಿ ಹಣ ಪತ್ತೆಯಾಗಿದೆ. ಮನೆಯ ಎರಡನೇ ಪ್ಲೋರ್ ನಲ್ಲಿ ವಾಸವಾಗಿರುವ ಶಾಂತಗೌಡ ಅಧಿಕಾರಿಗಳು ಬರುತ್ತಿದ್ದಂತೆ ಹಣದ ಕಂತೆಯನ್ನು ಪೈಪ್ ನಲ್ಲಿ ಹಾಕಿದ್ದಾರೆ. ಮೂಲಗಳ ಪ್ರಕಾರ ಶಾಂತನಗೌಡರ್ ಮನೆಯ ಪೈಪ್ ಗಳಲ್ಲಿ ಅಡಗಿಸಿಟ್ಟಿದ್ದ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು ಈ ವೇಳೆ ಸುಮಾರು 5 ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ ಎನ್ನಲಾಗಿದೆ.
Comments are closed.