ಕರಾವಳಿ

ಮಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆ ಸಹಿತ ದಲ್ಲಾಳಿಗಳಿಬ್ಬರ ಬಂಧನ

Pinterest LinkedIn Tumblr

ಮಂಗಳೂರು: ಅಕ್ರಮವಾಗಿ ಮಾನವ ಕಳ್ಳಸಾಗಾಟ ಮೂಲಕ ಮಂಗಳೂರಿಗೆ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ದಲ್ಲಾಳಿಗಳನ್ನು ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರನ್ನು ಅಬ್ದುಲ್ ಹಫೀಸ್(55) ಮತ್ತು ರಮ್ಲತ್(46) ಎಂದು ಗುರುತಿಸಲಾಗಿದೆ.

ಬೆಂಗಳೂರು , ಮಂಗಳೂರು, ಮೈಸೂರು, ಉಡುಪಿ ಹಾಗೂ ಇತರ ಕಡೆಗಳಲ್ಲಿನ ಯುವತಿ ಹಾಗೂ ಮಹಿಳೆಯರನ್ನು ಮಾನವ ಕಳ್ಳಸಾಗಾಟ ಮೂಲಕ ಮಂಗಳೂರಿಗೆ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಾರೆಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ದಲ್ಲಾಳಿಗಳನ್ನು ಬಂಧಿಸಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿದ್ದ ಓರ್ವ ಸಂತ್ರಸ್ತೆ ಯುವತಿಯನ್ನು ರಕ್ಷಿಸಲಾಗಿದೆ.

ಆರೋಪಿಗಳಿಂದ ದಸ್ತಗಿರಿ ಮಾಡಿದ ರೂ. 10,060 ನಗದು, 3 ಮೊಬೈಲ್ ಫೋನುಗಳು ಮತ್ತು ಸ್ಕಾರ್ಪಿಯೋ ಕಾರು ಸೇರಿ ಒಟ್ಟು ರೂ. 3,25,560 ಮೊತ್ತದ ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.