ಕುಂದಾಪುರ: ಆಟೋ ರಿಕ್ಷಾ ನಿಲ್ದಾಣದೊಳಗೆ ಟಿಪ್ಪರ್ ನುಗ್ಗಿದ ಪರಿಣಾಮ ನಾಲ್ಕು ಆಟೋಗಳು ಜಖಂ ಆದ ಘಟನೆ ಮಂಗಳವಾರ ಮಧ್ಯಾಹ್ನ ಉಡುಪಿ ಜಿಲ್ಲೆ ತ್ರಾಸಿ ಸಮೀಪದ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ.
ಘಟನೆ ವಿವರ:
ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಟಿಪ್ಪರ್ ಇದಾಗಿದ್ದು ಮುಳ್ಳಿಕಟ್ಟೆ ಕ್ರಾಸ್ ಬಳಿ ತಿರುವು ತೆಗೆದುಕೊಂಡು ಅತೀ ವೇಗದಿಂದ ಸಾಗಿ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ಆಟೋ ಸ್ಟ್ಯಾಂಡ್ ಒಳಕ್ಕೆ ನುಗ್ಗಿದೆ. ಪರಿಣಾಮ ನಿಲ್ದಾಣದಲ್ಲಿದ್ದ 4 ಆಟೋಗಳು ನಜ್ಜುಗುಜ್ಜಾಗಿದೆ. ಆಟೋ ಚಾಲಕರು ಅದೃಷ್ಡವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರುಕತೆ, ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನ ಕಾರಣ ಎನ್ನಲಾಗಿದ್ದು ಚಾಲಕ ಪಾನಮತ್ತನಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Comments are closed.