ಕರಾವಳಿ

ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗೆ 3 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ

Pinterest LinkedIn Tumblr

ಉಡುಪಿ: ಕೆಮ್ಮಣ್ಣುವಿನಲ್ಲಿ ಎಲೆಕ್ಟ್ರಾನಿಕ್ ವಸ್ತು ಹಾಗೂ ನಗದನ್ನು ಕಳವು ಮಾಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

(ಸಾಂದರ್ಭಿಕ ಚಿತ್ರ)

2014 ಫೆಬ್ರವರಿ 23 ರಂದು ಮಧ್ಯರಾತ್ರಿ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ವಾಸಿ ಗಿರೀಶ್ ಎಂಬಾತನು, ಪಡುತೋನ್ಸೆ ಗ್ರಾಮದ ಕೆಮ್ಮಣ್ಣುವಿನ ಕಾವ್ಯಾ ರವರ ಮನೆಯಲ್ಲಿ ಲ್ಯಾಪ್‌ಟಾಪ್, ಮೊಬೈಲ್ ಹಾಗೂ 700 ರೂ. ನಗದು ಕಳವು ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ರವರು ಆರೋಪಿ ಗಿರೀಶ್‌ಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ತಲಾ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿರುತ್ತಾರೆ

Comments are closed.