ಕರಾವಳಿ

ಮಂಗಳೂರಿನಲ್ಲಿ ಮೀನುಗಾರಿಕಾ ಬೋಟಿನಿಂದ ಬಿದ್ದು ಕಾರ್ಮಿಕ ಸಾವು

Pinterest LinkedIn Tumblr

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಮೀನುಗಾರಿಕಾ ಬೋಟ್ ನಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಂದರ್ ದಕ್ಕೆಯಲ್ಲಿ ನ.30 ರ ಮಂಗಳವಾರ ಸಂಜೆ ನಡೆದಿದೆ.

ಮೃತ ಮೀನುಗಾರನನ್ನು ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಬೋಟಿನಲ್ಲಿ‌ ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದು ಸತತವಾಗಿ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.

ಡಿ.01 ರ ಬೆಳಗ್ಗೆ ಮಲ್ಲಪಲ್ಲಿ ಅಪ್ಪಯ್ಯ ಅವರ ಮೃತದೇಹ ಬಂದರ್ ದಕ್ಕೆಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಪರಿಶೀಲ‌ನೆ ನಡೆಸಿದ್ದಾರೆ.

Comments are closed.