ಕರಾವಳಿ

ಸಹೋದರರ ಮೇಲೆ ವಾಹನ ಹತ್ತಿಸಿದ ಗೋಕಳ್ಳರು; ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಗೃಹಸಚಿವ

Pinterest LinkedIn Tumblr

ಉಡುಪಿ: ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಅಕ್ರಮ ಜಾನುವಾರು ಸಾಗಾಟ ತಡೆಯಲು ಯತ್ನಿಸಿದ ಸಹೋದರರ ಮೇಲೆ ಗೋಕಳ್ಳರು ವಾಹನ ಹತ್ತಿಸಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಗಾಯಾಳುಗಳನ್ನು ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರ ಆರೋಗ್ಯ ವಿಚಾರಿಸಿದ ಗೃಹಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದರು.

ಗಾಯಾಳುಗಳಾದ ಶಿವಮೊಗ್ಗ ಪಟ್ಟಣ ಸಮೀಪದ ಕಿತ್ತನಗದ್ದೆ ಗ್ರಾಮದ ಚರಣ್ (24), ಕಿರಣ್ (23) ಅವರು ಮೇಳಿಗೆಯಿಂದ ಗೋವುಗಳ ಸಾಗಣೆ ವಿಷಯ ತಿಳಿದು ಬುಲೆಟ್ ಬೈಕ್‌ನಲ್ಲಿ ಬೆನ್ನಟ್ಟಿದ್ದಾರೆ. ಇದರಿಂದ ವಿಚಲಿತರಾದ ಜಾನುವಾರು ಕಳ್ಳರು ಬೆಜ್ಜವಳ್ಳಿಯ ಸಮೀಪ ಬೈಕ್ ಸವಾರರ ಮೇಲೆ ವಾಹನ ಚಲಾಯಿಸಿ ಪರಾರಿಯಾಗಿದ್ದಾರೆ.

ತಕ್ಷಣ ಎಚ್ಚೆತ್ತುಕೊಂಡ ಸಾರ್ವಜನಿಕರು ಘಟನಾ ಸ್ಥಳದಿಂದ ಪರಾರಿಯಾಗುತ್ತಿದ್ದ ಶಿವಮೊಗ್ಗ ನಗರದ ನವೀದ್ (27) ಎಂಬಾತನನ್ನು ಹಿಡಿದು ಮಾಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮಾಳೂರು ಠಾಣೆ ವಶದಲ್ಲಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.