ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದ 89ನೇ ಸರ್ವಧರ್ಮ ಸಮ್ಮೇಳನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ

Pinterest LinkedIn Tumblr

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಅಂಗವಾಗಿ ನಡೆಯುತ್ತಿರುವ 89ನೇ ಸರ್ವಧರ್ಮ ಸಮ್ಮೇಳನಕ್ಕೆ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸರ್ವಧರ್ಮೀಯರು ಸಂದರ್ಶಿಸುವ ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳವಾಗಿದ್ದು ಇಲ್ಲಿ ಲಕ್ಷ ದೀಪೋತ್ಸವದ ಅಂಗವಾಗಿ ‌ನಡೆಯುತ್ತಿರುವ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಕ್ಕೆ ಸಂತಸವಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರವಾಗಿದೆ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಸ್-ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೊ.ರಾಮಚಂದ್ರ ಜಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್ ಪದ್ಮ, ಫಾ.ವೀರೇಶ್ ಮೊರಸ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳು, ವಿದ್ವಾಂಸರು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

Comments are closed.