ಕರ್ನಾಟಕ

ಬೆಂಗಳೂರಿನ ಇಂದಿರಾನಗರದಲ್ಲಿ ಸರಣಿ ಅಪಘಾತ: ಬೆಂಜ್ ಕಾರಿನ ಓವರ್ ಸ್ಪೀಡ್’ಗೆ ಓರ್ವ ಬಲಿ, ಹಲವರಿಗೆ ಗಾಯ, ವಾಹನಗಳು ಜಖಂ

Pinterest LinkedIn Tumblr

ಬೆಂಗಳೂರು: ಇಂದಿರಾನಗರದ 80 ಅಡಿ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬೆಂಜ್ ಕಾರಿನ ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರು, ಆಟೋ ಮತ್ತು ಗೂಡ್ಸ್ ವಾಹನಗಳು ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು ಇನ್ನು ಹಲವರು ಗಾಯಾಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲಸೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ರಭಸಕ್ಕೆ ಒಂದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

ಅಪಘಾತದ ಬಳಿಕ ವಾಹನ ತೆರವುಗೊಳಿಸಿ ರಸ್ತೆ ಸಂಚಾರವನ್ನು ಬಂದ್ ಮಾಡಿರುವ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.