ಕರಾವಳಿ

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ

Pinterest LinkedIn Tumblr

ಕುಂದಾಪುರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾಗಣಪತಿಯಾಗ ನಡೆಯಿತು. ರಥೋತ್ಸವದ ಪ್ರಯುಕ್ತ ಡಿ.4 ರಿಂದ ದೇವಸ್ಥಾನದಲ್ಲಿ ಉತ್ಸವಾದಿಗಳು ಆರಂಭಗೊಂಡಿದ್ದವು. ಮೂರು ದಿನಗಳ ಕಾಲ ಕಟ್ಟೆಪೂಜಾ ಉತ್ಸವ ನಡೆದಿತ್ತು. ಬ್ರಹ್ಮರಥೋತ್ಸವದ ದಿನವಾದ ಇಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳು ಸಂಪನ್ನಗೊಂಡವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಊರು ಹಾಗೂ ಪರಊರಿನಿಂದ ಬಂದಿದ್ದ ಸಾವಿರಾರು ಭಕ್ತಾದಿಗಳು, ವಿನಾಯಕ ದೇವರು ರಥಾರೂಢನಾಗಿ ವಿರಾಜಮಾನವಾಗುವ ದೃಶ್ಯವನ್ನು ಕಣ್ತುಂಬಿಕೊಂಡು‌ ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಅನುವಂಶಿಕ ಪರ್ಯಾಯ ಅರ್ಚಕರಾದ ಕೆ.ವೆಂಕಟರಮಣ ಉಪಾಧ್ಯಾಯ, ಅನುವಂಶಿಕ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಕೆ.ವಿಠಲ ಉಪಾಧ್ಯಾಯ, ವ್ಯವಸ್ಥಾಪಕ ನಟೇಶ್ ಕಾರಂತ್ ಇದ್ದರು.

ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ, ಸರ್ಕಲ್ ಇನ್ಸ್‌ಪೆಕ್ಟರ್ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Comments are closed.