ಪ್ರಮುಖ ವರದಿಗಳು

ಹೆಲಿಕಾಪ್ಟರ್ ದುರಂತ ಪ್ರಕರಣ; ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಲಿ- ಸುಬ್ರಮಣಿಯನ್ ಸ್ವಾಮಿ

Pinterest LinkedIn Tumblr

ಉಡುಪಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿಸಂತೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆ ಆಗಬೇಕಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ.

ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಹಿರಿಯ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆ ನಡೆಸಬೇಕು. ಈ ಬಗ್ಗೆ ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಜನಸಾಮಾನ್ಯರಿಗೆ ಸತ್ಯಾಂಶ ತಿಳಿಯಬೇಕು ಎಂದರು.

ರಾವತ್ ದಂಪತಿ ಸೇರಿ 14 ಮಂದಿ Mi-17V5 ಸೇನಾ ಹೆಲಿಕಾಪ್ಟರ್‌ನಲ್ಲಿ ತಮಿಳುನಾಡಿನ ವೆಲ್ಲಿಂಗ್ಟನ್‍ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಊಟಿ ಬಳಿಯ ಕೂನೂರಿನ ಸಮೀಪ ಬರುತ್ತಿದ್ದಂತೆ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಪತನಗೊಂಡಿದೆ. ಪರಿಣಾಮ 13 ಮಂದಿ ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.