ಮಂಗಳೂರು: ಚಪ್ಪಲಿ ಅಂಗಡಿಗೆ ಬಂದ ಮಹಿಳಾ ಗ್ರಾಹಕಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿ ಭಾನುವಾರ ನಡೆದಿದೆ.
ಬಂಧಿತ ವ್ಯಕ್ತಿಯನ್ನು ಅಂಗಡಿ ಮಾಲಿಕ ಸಂಶುದ್ದೀನ್ ಎಂದು ಗುರುತಿಸಲಾಗಿದೆ.
ತನ್ನ ಚಪ್ಪಲಿ ಅಂಗಡಿಗೆ ಬಂದ ಮಹಿಳಾ ಗ್ರಾಹಕಿಗೆ ಅಂಗಡಿ ಮಾಲಿಕ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿಗೆ ಅವರು ತೋರಿಸಿದ ಚಪ್ಪಲಿ ಇಷ್ಟವಾಗದೇ ಇದ್ದಾಗ, ಬೇರೆ ಚಪ್ಪಲಿಗಳನ್ನು ತೋರಿಸುವುದಾಗಿ ತಿಳಿಸಿ ಮಹಿಳಾ ಗ್ರಾಹಕಿ ಯನ್ನು ಅಂಗಡಿಯ ಒಳಗಿದ್ದ ಇನ್ನೊಂದು ಕಂಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಮಹಿಳಾ ಗ್ರಾಹಕಿಯ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ದಾಖಲಾಗಿದೆ.
Comments are closed.