ಕರಾವಳಿ

ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನ ಪಡೆದ ನಟ ದರ್ಶನ್, ಹಾಸ್ಯ ನಟ ಚಿಕ್ಕಣ್ಣ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ್, ಹಾಸ್ಯನಟ ಚಿಕ್ಕಣ್ಣ ಹಾಗೂ ಸ್ನೇಹಿತರು ಭಾನುವಾರ ಭೇಟಿ ನೀಡಿದರು.

ದೇವಳದಲ್ಲಿ ನಡೆಸಲಾಗುವ ನವಚಂಡಿಕಾ ಯಾಗದಲ್ಲಿ ಪಾಲ್ಗೊಂಡ ಅವರು, ಬಳಿಕ ದೇವಿಯ ದರ್ಶನ ಪಡೆದರು.

ಈ ಸಂದರ್ಭ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹಾಗೂ ಮೊದಲಾದವರು ಚಿತ್ರ ನಟರನ್ನು ಬರಮಾಡಿಕೊಂಡು ದೇವಳದ ವತಿಯಿಂದ ಗೌರವಿಸಿದರು.

Comments are closed.