ಕರಾವಳಿ

ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿ; ಪೋಕ್ಸೋ ಕಾಯ್ದೆಯಡಿ ಬಂಧನ

Pinterest LinkedIn Tumblr

ಉಡುಪಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸೋ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿ ಜಗನ್ನಾಥ್(54) ಎಂದು ಗುರುತಿಸಲಾಗಿದೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್‌ನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿತ್ತು. ಅದರಂತೆ ಘಟಕದ ಅಧಿಕಾರಿಗಳು ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

Comments are closed.