ಪ್ರಮುಖ ವರದಿಗಳು

ವಾರಣಾಸಿಯಲ್ಲಿ ತಡರಾತ್ರಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

ವಾರಾಣಸಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಧ್ಯರಾತ್ರಿಯವರೆಗೂ ಸಭೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ತಡರಾತ್ರಿ ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು.

 

ಸೋಮವಾರ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ದೇವಸ್ಥಾನದ ಕಾರಿಡಾರ್‌ ನ ಮೊದಲ ಹಂತದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ರಾತ್ರಿ ಗಂಗಾರತಿಯಲ್ಲಿ ಪಾಲ್ಗೊಂಡ ಬಳಿಕ ಬಿಜೆಪಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾರಾಣಸಿ ಪಟ್ಟಣದಲ್ಲಿ ಮೋದಿ ಜೊತೆಗೆ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಇದ್ದರು.

‘ಮುಂದಿನ ನಿಲ್ದಾಣ ಬನಾರಸ್ ನಿಲ್ದಾಣ. ನಾವು ರೈಲು ಸಂಪರ್ಕವನ್ನು ಹೆಚ್ಚಿಸಲು ಹಾಗೂ ಸ್ವಚ್ಛ, ಆಧುನಿಕ ಮತ್ತು ಪ್ರಯಾಣಿಕರ ಸ್ನೇಹಿ ರೈಲು ನಿಲ್ದಾಣಗಳನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದ್ದೇವೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

 

Comments are closed.