ಮೈಸೂರು: ಸ್ನಾನದ ವೇಳೆ ಮೈಮೇಲೆ ಬಿಸಿ ನೀರು ಬಿದ್ದು 2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತ ಮಗು. ಸ್ನಾನ ಮಾಡಿಸುವಾಗ ತಣ್ಣೀರು ತರುವುದಕ್ಕೆಂದು ತಾಯಿ ಹೋಗಿದ್ದರು. ಈ ವೇಳೆ ತಿಳಿಯದೆ ಮಗು ಮೈಮೇಲೆ ಬಿಸಿ ನೀರು ಸುರಿದುಕೊಂಡಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆದ್ಯಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೆ.ಆರ್.ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ.
Comments are closed.