ಕರಾವಳಿ

ಮಂಗಳೂರು ಪ್ರೆಸ್ ಕ್ಲಬ್‌ ಪ್ರಶಸ್ತಿಗೆ ಅರ್ಜಿ ಆಹ್ವಾನ

Pinterest LinkedIn Tumblr

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದ.ಕ. ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್ ನ 2021ನೇ ಸಾಲಿನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿದ ದ.ಕ. ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈ ವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುವುದು.

ಶಿಫಾರಸಿನಲ್ಲಿ ಸಾಧಕರ ಹೆಸರು, ಖಾಯಂ ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ ಮೊದಲಾದ ಮಾಹಿತಿಗಳಿರಬೇಕು. ಸಾಧಕರ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಅಗತ್ಯ. ಶಿಫಾರಸು ಪತ್ರದೊಂದಿಗೆ ಸಾಧಕರ ಸಾಧನೆಯ ಬಗ್ಗೆ 200 ಶಬ್ದಗಳಿಗೆ ಮೀರದಂತೆ ಪರಿಚಯ ಹಾಗೂ ಸಂಪೂರ್ಣ ಮಾಹಿತಿಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಡಿಸೆಂಬರ್ 31, 2021 ಸಂಜೆ 4 ಗಂಟೆಯ ಒಳಗಾಗಿ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾ ಭವನ ಕಟ್ಟಡ, ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು -6.ಇಲ್ಲಿಗೆ ಕಳುಹಿಸಿಕೊಡಬಹುದಾಗಿದೆ.

ಒಬ್ಬರಿಗೆ ಇಬ್ಬರು ಸಾಧಕರನ್ನು ಶಿಫಾರಸು ಮಾಡುವ ಅವಕಾಶ ಇದೆ. ತಜ್ಞರ ಸಮಿತಿಯು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿದೆ.

ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಪ್ರೆಸ್ ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.