ಕರಾವಳಿ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ ನಾಲ್ಕನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ

Pinterest LinkedIn Tumblr

ಮಂಗಳೂರು : ಸಾಧನೆಯ 90 ವರ್ಷಗಳ ಸಾರ್ಥಕ ಸೇವೆಯಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ ನಾಲ್ಕನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ ಲಭಿಸಿದೆ . ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶಕ್ತಿ ಆಗಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಸಹಕಾರ ರಂಗದಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಪ್ರಗತಿ ಪಥದಲ್ಲಿದೆ.

ನೌಕರರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿರುವ ಈ ಸಂಘವು ಉತ್ತಮ ಸೇವೆಯನ್ನು ನೀಡುತ್ತಿದ್ದು , ಕಳೆದ 25 ವರ್ಷಗಳಿಂದ ಸಂಘವು ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಪೂರೈಸಿ ಸದೃಢವಾಗಿ ಬೆಳೆದಿದೆ .

ಸಂಘದ ಕಾರ್ಯ ಸಾಧನೆಯನ್ನು ಗುರುತಿಸಿ ಎಸ್ ಸಿಡಿಸಿಸಿ ಬ್ಯಾಂಕ್ ನೀಡುವ ಸಾಧನಾ ಪ್ರಶಸ್ತಿ 2017-18 ,‌ 2018-19 ಮತ್ತು 2019-20ರ ಸಾಲಿನಲ್ಲಿ ಪ್ರಾಪ್ತಿಯಾಗಿತ್ತು . ಇದೀಗ 2020-21ನೇ ಸಾಲಿನಲ್ಲೂ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘವು ಮುಡಿಗೇರಿಸಿಕೊಂಡಿದೆ

ಎಸ್ ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ನೀಡಿದ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷರಾದ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವೀಕರಿಸಿಕೊಂಡರು .

ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ , ನಿರ್ದೇಶಕರು ಗಳಾದ ಬಿ .ನಿರಂಜನ , ಟಿ.ಜಿ.ರಾಜರಾಮ ಭಟ್, ಭಾಸ್ಕರ್ ಎಸ್ ಕೋಟ್ಯಾನ್ , ವಾದಿರಾಜ ಶೆಟ್ಟಿ ಎಂ , ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ ಬಾಲ್ಯೋಟ್ಟು , ಎಸ್. ಬಿ.ಜಯರಾಮ್ ರೈ , ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ , ಮೋನಪ್ಪ ಶೆಟ್ಟಿ , ಹರಿಶ್ಚಂದ್ರ , ಕೆ. ಜೈರಾಜ್ ಬಿ.ರೈ , ಸದಾಶಿವ ಉಳ್ಳಾಲ್ , ರಾಜೇಶ್ ರಾವ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ.ನಾಯಕ್ , ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರುಗಳಾದ ಇಂದ್ರಾಳಿ ಜಯಕರ ಶೆಟ್ಟಿ , ಕೌಶಲ್ ಪ್ರಸಾದ್ ಶೆಟ್ಟಿ ಹಾಗೂ ಬ್ಯಾಂಕಿನ ಮಹಾಪ್ರಬಂಧಕರಾದ ಗೋಪಿನಾಥ್ ಭಟ್ ಉಪಸ್ಥಿತರಿದ್ದರು .

Comments are closed.