ಕರ್ನಾಟಕ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿ ಪುಂಡರ ಅಟ್ಟಹಾಸ..!

Pinterest LinkedIn Tumblr

ಬೆಳಗಾವಿ: ಬೆಳಗಾವಿಯಲ್ಲಿ ಪುಂಡರು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಘಟನೆ ಶನಿವಾರ ಬೆಳಗಿನ ಜಾವ 3 ಗಂಟೆ ಸಮಾರಿಗೆ ನಡೆದಿದೆ.

ಬೆಳಗಾವಿಯ ಅನಗೋಳದ ಕನಕದಾಸ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುತ್ಥಳಿಯನ್ನು ಕೆಡವಿದ್ದಾರೆ.

ಪುತ್ಥಳಿಯನ್ನು ಭಗ್ನಗೊಳಿಸಿ ಖಡ್ಗ, ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ಅಗೌರವವನ್ನು ಸೂಚಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತಯೇ ಸ್ಥಳಕ್ಕೆ ಟಿಳಕವಾಡಿ ಪೊಲೀಸರು ಭೇಟಿ ನೀಡಿದ್ದಾರೆ.

ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳು ದಿಢೀರ್​ ಪ್ರತಿಭಟನೆ ನಡೆಸಿದ್ದು ಪ್ರತಿಭಟನೆ ವೇಳೆ ಕೆಲ ಎಂಇಎಸ್​ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಕರ್ತವ್ಯಕ್ಕೆ ಬಂದಿರುವ ಸರ್ಕಾರಿ ವಾಹನಗಳ ಮೇಲೆ ಕಲ್ಲು ಎಸೆದು ಉದ್ಧಟತನ ಮೆರೆಯಲಾಗಿದೆ. ಲಾಡ್ಜ್​ ಮುಂಭಾಗದಲ್ಲಿ ನಿಲ್ಲಿಸಿದ್ದ ಸರ್ಕಾರದ ಕಾರುಗಳ ಮೇಲೆ ಕಲ್ಲು ತೂರಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಕರ್ನಾಟಕ ಸರ್ಕಾರ ಎಂದು ಹೆಸರು ಬರೆದಿರುವ ಕಡೆ ಉದ್ದೇಶಪೂರ್ವಕವಾಗಿ ಕಲ್ಲು ಎಸೆಯಲಾಗಿದ್ದು, ಕೆಲ ವಾಹನಗಳ ಬೋರ್ಡ್​​ಗಳನ್ನ ಕಿತ್ತು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಬಿಗುವಿನ ವಾತಾವರಣ ನಿರ್ಮಾಣಗೊಳ್ಳುತ್ತಿದ್ದಂತೆ ಪರಿಸ್ಥಿತಿ ‌ನಿಯಂತ್ರಿಸಲು ಬೆಳಗಾವಿ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಕಲ್ಲು ತೂರಿ ಪುಂಡಾಟ ಮೆರೆಯುತ್ತಿದ್ದವರ ಮೆಲೆ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ.

ಕಳೆದ ರಾತ್ರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಹಿನ್ನೆಲೆ ಭದ್ರತೆಗೆ ಹೆಚ್ಚಿನ ಪೊಲೀಸ್ ​ಪಡೆಗಳನ್ನು‌ ನಿತೋಜಿಸಲಾಹಿದೆ. ಅಹಿತಕರ ವಾತಾವರಣ ಸೃಷ್ಟಿಯಾಗದಂತೆ ನಗರದ ಎಲ್ಲೆಡೆ ಪೊಲೀಸರು ಗಸ್ತು ಆರಂಭಿಸಿದ್ದಾರೆ.

 

Comments are closed.