ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ರಾಷ್ಟ್ರಭಕ್ತರ ಪ್ರತಿಮೆಗೆ ಭಂಗ ತರುವುದು ಸರಿಯಲ್ಲ. ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಗೌರವಿಸಬೇಕು. ನಾಡಿಗೆ ಹೋರಾಡಿದವರ, ತ್ಯಾಗ ಮಾಡಿದವರ ಗೌರವ ಉಳಿಸಬೇಕು.
ನಾಡಿನಲ್ಲಿ ಕ್ಷೋಭೆ ಉಂಟುಮಾಡುವುದು ಸರಿಯಲ್ಲ. ಕೆಲವೇ ಕೆಲವು ಪುಂಡರು ಇಂತಹ ದುಷ್ಕೃತ್ಯ ಮಾಡುತ್ತಿದ್ದು, ಅವರನ್ನು ಸದೆಬಡಿಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಹೇಳಿದ್ದಾರೆ.
Comments are closed.