ಕರ್ನಾಟಕ

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಲು ನಟ ದರ್ಶನ್ ಆಗ್ರಹ

Pinterest LinkedIn Tumblr

ಬೆಂಗಳೂರು: ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿ ಅಗೌರವ ಮಾಡಿದ ಬಗ್ಗೆ ನಟ ದರ್ಶನ್ ಖಂಡಿಸಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಟ್ಯಾಗ್ ಮಾಡಿದ್ದಾರೆ.

2012ರಲ್ಲಿ ಬಿಡುಗಡೆಯಾದ ನಾಗಣ್ಣ ನಿರ್ದೇಶನದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಐತಿಹಾಸಿಕ ಚಿತ್ರದಲ್ಲಿ ದರ್ಶನ್ ರಾಯಣ್ಣನ ಪಾತ್ರ ಮಾಡಿದ್ದರು.

 

Comments are closed.