ಕರಾವಳಿ

ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ರಾಜೇಶ್ ಭಟ್ ಗೆ ನ್ಯಾಯಾಂಗ ಬಂಧನ

Pinterest LinkedIn Tumblr

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಇಂದು ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿ ವಕೀಲ ರಾಜೇಶ್ ಭಟ್ ಮೂರನೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಇಂದು ಸಂಜೆ 3 ಗಂಟೆಯ ವೇಳೆಗೆ ಶರಣಾಗಿದ್ದು, ಈತನ ವಿರುದ್ಧ ಅ. 18ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು.

ರಾಜೇಶ್ ಭಟ್ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದು, ಇದೀಗ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು, ಜಾಮೀನು ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.