ಮಂಗಳೂರು: ಮಂಗಳೂರಿನಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ವೈಶಾಲಿ ಗಾಯಕ್ ವಾಡ್ (25) ನೇಣಿಗೆ ಶರಣಾಗಿದ ಘಟನೆಗೆ ಸಂಬಂಧಿಸಿದಂತೆ ಆಕೆ ಸ್ನೇಹಿತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆ ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು.
ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಆಕೆಯ ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್(24) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.