ಕಾನ್ಪುರ: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ಕಾಯ್ದೆಯಡಿ ಮೊದಲ ತೀರ್ಪು ಪ್ರಕಟಿಸಲಾಗಿದ್ದು, ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಿ ಕಾನ್ಪುರ ನ್ಯಾಯಾಲಯ ತೀರ್ಪು ನೀಡಿದೆ.
(ಸಾಂದರ್ಭಿಕ ಚಿತ್ರ)
ಈ ಘಟನೆ 2017ರ ಮೇ ತಿಂಗಳಲ್ಲಿ ನಡೆದಿತ್ತು. ಜಾವೇದ್ ಎಂಬ ಮುಸ್ಲಿಂ ಯುವಕ ತನ್ನನ್ನು ಹಿಂದೂ ಎಂದು ಪರಿಚಯಿಸಿಕೊಂಡು ಬಾಲಕಿಯೊಬ್ಬಳನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ನಂತರ ಆತ ಬಾಲಕಿಯನ್ನು ಕರೆದುಕೊಂಡು ಪರಾರಿಯಾಗಿದ್ದ. ತನಿಖೆ ಕೈಗೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದರು.
ತನ್ನ ಭಾವಿ ಗಂಡನ ಮನೆಗೆ ತೆರಳಿದ್ದಾಗ ಆತ ತನ್ನ ನಿಜವಾದ ಗುರುತನ್ನು ಬಹಿರಂಗಪಡಿಸಿ, ನಿಖಾ ಮಾಡಿಕೊಳ್ಳೊಣ ಎಂದು ಹೇಳಿದ್ದ, ಅದಕ್ಕೆ ತಾನು ನಿರಾಕರಿಸಿದೆ ಎಂದು ಬಾಲಕಿ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮೇಲೆ ಯುವಕ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಳು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.