ಪ್ರಮುಖ ವರದಿಗಳು

ಪಂಜಾಬ್‌ನ ಲೂಧಿಯಾನದ ಕೋರ್ಟ್‌ನಲ್ಲಿ ಸ್ಫೋಟ ಇಬ್ಬರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ

Pinterest LinkedIn Tumblr

ಲೂಧಿಯಾನ: ಪಂಜಾಬ್‌ನ ಲೂಧಿಯಾನದ ಕೋರ್ಟ್‌ನಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಇಬ್ಬರು ಸಾವಿಗೀಡಾಗಿದೆ. ನಾಲ್ವರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಬಾತ್‌ರೂಮ್‌ನ ಗೋಡೆಗೆ ಹಾನಿಯಾಗಿದ್ದು, ಹತ್ತಿರದ ಕಿಟಕಿಗಳ ಗಾಜುಗಳು ಛಿದ್ರಗೊಂಡಿವೆ. ಸ್ಫೋಟಕ್ಕೆ‌ ನಿಖರ ಕಾರಣವೇನೆಂಬುದು ಸದ್ಯ ತಿಳಿದು ಬಂದಿಲ್ಲ.

ಪಂಜಾಬ್‌ನ ಲೂಧಿಯಾನದಲ್ಲಿ ನ್ಯಾಯಾಲಯದ ಸಂಕೀರ್ಣದಲ್ಲಿ ಹಠಾತ್ ಸ್ಫೋಟ ಸಂಭವಿಸಿದೆ. ಕಟ್ಟಡದ ಎರಡನೇ ಮಹಡಿಯಲ್ಲಿರುವ ಸ್ನಾನಗೃಹದಲ್ಲಿ ಮಧ್ಯಾಹ್ನ 12:22 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ನಾನಗೃಹದ ಗೋಡೆಗಳಿಗೆ ಹಾನಿಯಾಗಿದೆ ಮತ್ತು ಹತ್ತಿರದ ಕಿಟಕಿಗಳ ಗಾಜುಗಳು ಒಡೆದು ಹೋಗಿವೆ. ಪೊಲೀಸರು ಘಟನಟಮಾ ಪ್ರದೇಶವನ್ನು ಸುತ್ತುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದರುವ ಪಂಜಾಬ್ ಮುಖ್ಯ ಮಂತ್ರಿ ಚರಂಜಿತ್ ಸಿಂಗ್ ಚನ್ನಿ, ನಾನು ಲೂಧಿಯಾನಕ್ಕೆ ಹೋಗುತ್ತಿದ್ದೇನೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೆಲವು ದೇಶ ವಿರೋಧಿಗಳು ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಅಲರ್ಟ್ ಆಗಿದೆ. ತಪ್ಪಿತಸ್ಥರೆಂದು ಕಂಡುಬಂದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

 

Comments are closed.